8 ವರ್ಷಗಳ ಹಿಂದೆ ಗುರುಪೂರ್ಣಿಮೆಯ ದಿನ ಸಿದ್ದೇಶ್ವರ ಶ್ರೀಗಳು ಬರೆದಿದ್ದ ಅಂತಿಮ ಅಭಿವಂದನಾ ಪತ್ರದಲ್ಲಿ ಆಶಯ ಏನಿದೆ ಗೊತ್ತೇ?
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ.

ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ.
ಅಪಾರ ಸಂಖ್ಯೆಯ ಭಕ್ತಾದಿಗಳು, ಅನುಯಾಯಿಗಳನ್ನು ಹೊಂದಿದ್ದ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬರುತ್ತಿದೆ. ಶ್ರೀಗಳ ದೇಹಾಂತ್ಯವಾದೊಡನೆ ಯೋಗಾಶ್ರಮದ ಅಧಿಕಾರಿಗಳು/ಸಿಬ್ಬಂದಿಗಳು ಶ್ರೀಗಳು 8 ವರ್ಷಗಳ ಹಿಂದೆ ಗುರುಪೂರ್ಣಿಮೆಯಂದು ಬರೆಸಿದ್ದ ಅಂತಿಮ ಅಭಿವಂದನಾ ಪತ್ರವನ್ನು ಬಹಿರಂಗಪಡಿಸಿದ್ದಾರೆ.
ಇದರಲ್ಲಿ ಶ್ರೀಗಳು ತಮ್ಮ ಅಂತ್ಯಕ್ರಿಯೆ ಹೇಗಿರಬೇಕೆಂಬ ಸೂಚನೆಯನ್ನು ನೀಡಿದ್ದಾರೆ. ಶ್ರೀಗಳ ಅಂತಿಮ ಅಭಿವಂದನಾ ಪತ್ರದ ಸಾರಾಂಶ ಹೀಗಿದೆ..
"ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು, ಅದಕ್ಕಾಗಿ ಈ ಅಂತಿಮ ಅಭಿವಂದನಾ ಪತ್ರ" ಎಂದು ಶ್ರೀಗಳು ಹೇಳಿದ್ದಾರೆ.
ಇದನ್ನೂ ಓದಿ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; "ಜಂಗಮರಿಗೆ ಅಳಿವಿಲ್ಲ"- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ
ತಮ್ಮ ದೇಹಾಂತ್ಯವಾದ ಬಳಿಕ ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡಬೇಕು, ಶ್ರಾದ್ಧಿಕ ವಿಧಿ-ವಿಧಾನ ಕರ್ಮಗಳು ಅಗತ್ಯವಿಲ್ಲ, ತಮ್ಮ ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜನೆ ಮಾಡಬೇಕು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಶ್ರೀಗಳು ಸೂಚನೆ ನೀಡಿದ್ದಾರೆ. ಅದರಂತೆಯೇ ಅಂತ್ಯಕ್ರಿಯೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


