ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಮೆಚ್ಚಿನ ಫೋಟೋಗ್ರಾಫರ್ ರಾಮನಗರ ಕೆರೆಯಲ್ಲಿ ಮುಳುಗಿ ಸಾವು
ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಾಮನಗರ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಪ್ರಸನ್ನ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾವತ್ತೂರು ಕೆರೆಗೆ ಹೊಸ ವರ್ಷಾಚರಣೆ ಮಾಡಲು ಸಹೋದರ ಕೌಶಿಕ್ ಸೇರಿ ಐವರು ಸ್ನೇಹಿತರ ಜೊತೆ ಪ್ರಸನ್ನ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಾಡಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಅಧಿವೇಶನದಲ್ಲಿದ್ದು, ಪ್ರಸನ್ನ ಅವರು ರಜೆಯಲ್ಲಿದ್ದ ಕಾರಣದಿಂದಾಗಿ ಕನಕಪುರದಲ್ಲಿದ್ದ ಸ್ನೇಹಿತ ಕೌಶಿಕ್ ಮನೆಗೆ ಬಂದಿದ್ದರು.
ಮಾವತ್ತೂರು ಕೆರೆಯಲ್ಲಿ ಈಜಲು ಹೋದಾಗ ಪ್ರಸನ್ನ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಭಾನುವಾರ ರಾತ್ರಿ ಶವ ಪತ್ತೆಯಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


