ಮತದಾರರ ದತ್ತಾಂಶ ತಿರುಚಿದ ಪ್ರಕರಣ: ತಡೆಯಾಜ್ಞೆ ತಂದ ಅಧಿಕಾರಿಗಳು; ತನಿಖೆಗೆ ಹಿನ್ನಡೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.
ಹಲಸೂರು ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, ಕಂದಾಯ ಅಧಿಕಾರಿಗಳು ಡಿಸೆಂಬರ್ 22 ರಂದು ತಡೆಯಾಜ್ಞೆ ತಂದಿದ್ದಾರೆ. ನಾವು ವಿಚಾರಣೆಗಾಗಿ ಇನ್ನೂ ಕೆಲವು ಅಧಿಕಾರಿಗಳಿಗೆ ನೋಟಿಸ್ ನೀಡಲಿದ್ದೇವೆ. ಆದರೆ ಅದಕ್ಕೂ ಮೊದಲು, ತನಿಖೆಯ ವಿರುದ್ಧ ನಮಗೆ ತಡೆಯಾಜ್ಞೆ ಪ್ರತಿಯನ್ನು ನೀಡಲಾಯಿತು. ಸಂಸ್ಥೆಯ ಮುಖ್ಯಸ್ಥರಾಗಿರುವ ಬಿಬಿಎಂಪಿ ಆಯುಕ್ತರು ಈ ಸಂಬಂಧ ಪ್ರತಿವಾದಿಯಾಗಿದ್ದು, ತಡೆಯನ್ನು ತೆರವು ಮಾಡುವುದು ಅವರಿಗೆ ಬಿಟ್ಟಿದ್ದು, ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲು ನಮಗೆ ಅವಕಾಶವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಬಿಬಿಎಂಪಿ ಪ್ರತಿವಾದಿಯಾಗಿರುವುದರಿಂದ ಶೀಘ್ರವೇ ತಡೆಯನ್ನು ತೆರವು ಮಾಡಿ ತನಿಖೆ ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಹಿಂದೆ ಕೆಲವು ಕಂದಾಯ ಅಧಿಕಾರಿಗಳ ಬೆನ್ನಿಗೆ ಬಿದ್ದಿದ್ದ ಬಿಬಿಎಂಪಿ ಕಾರ್ಮಿಕರ ಸಂಘ ಕೂಡ ಕಳಂಕಿತ ಎನ್‌ಜಿಒ ಸಂಸ್ಥೆಯ ಮುಖ್ಯಸ್ಥರನ್ನು ಬಂಧಿಸಿ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರಿಂದ ಪ್ರಕರಣದಿಂದ ದೂರವಿರಲು ನಿರ್ಧರಿಸಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.
ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ತಿದ್ದಿದೆ. ಕೆಲವು ಕಂದಾಯ ಅಧಿಕಾರಿಗಳು ಸಹಾಯ ಮಾಡಿದ ನಕಲಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಡ್‌ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿರುವುದರಿಂದ, ನಮ್ಮ ವಕೀಲರು ಮಧ್ಯಪ್ರವೇಶಿಸದಂತೆ ಅದನ್ನು ಕಂದಾಯ ಅಧಿಕಾರಿಗಳು ಮತ್ತು ಪೊಲೀಸರಿಗೆ ಬಿಟ್ಟುಕೊಡಲು ನಮಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


