ದಲಿತ ಯುವತಿ ಮೇಲೆ ಅತ್ಯಾಚಾರ: ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ; ದಲಿತ ಸಂಘಟನೆ ಎಚ್ಚರಿಕೆ
ಆಡಳಿತಾರೂಢ ಬಿಜೆಪಿ ಸರ್ಕಾರವು ಮೈಸೂರಿನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘಟನೆ ಎಚ್ಚರಿಕೆ ನೀಡಿದೆ.

ಮೈಸೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವು ಮೈಸೂರಿನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘಟನೆ ಎಚ್ಚರಿಕೆ ನೀಡಿದೆ.
ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಂತ್ರಸ್ತೆ, ಬುಧವಾರ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ದೂರು ನೀಡಿದ್ದು, ಅವರ ಪತಿ ರಾಜ್ಯ ಬಿಜೆಪಿ ನಾಯಕತ್ವದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
2019ರ ಮಾರ್ಚ್ 2ರಂದು ಪತ್ರಿಕೆಯಲ್ಲಿ ಜಾಹೀರಾತು ಬಂದಿದ್ದರಿಂದ ಕೆಲಸ ಅರಸಿ ಮಂಜುನಾಥ್ ಅವರ ನಿವಾಸಕ್ಕೆ ಹೋಗಿದ್ದೆ. ಆರೋಪಿ ಕೆಲಸ ಕೊಡಿಸುವುದಾಗಿ ಹೇಳಿದ್ದರು. ಬಳಿಕ ಕರ್ತವ್ಯಕ್ಕೆ ಹಾಜರಾದಾಗ ಮತ್ತು ಬರಿಸುವ ಔಷಧಿ ಬೆರೆಸಿದ ಜ್ಯೂಸ್ ನೀಡಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಮೇಲೆ ಅತ್ಯಾಚಾರ ಎಸಗಿ, ಫೋಟೊಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ನಂತರ ಮಂಜುನಾಥ್ ಜೀವ ಬೆದರಿಕೆ ಹಾಕಿ ಬಲವಂತವಾಗಿ ಮದುವೆಯಾಗಿದ್ದರು. ಮದುವೆಯ ನಂತರವೂ ಆತ ಕಿರುಕುಳ ಮತ್ತು ಹಲ್ಲೆ ಮುಂದುವರಿಸಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ, ಘಟನೆಯನ್ನು ಖಂಡಿಸಿರುವ ದಲಿತ ಸಂಘರ್ಷ ಸಮಿತಿ, ಆಡಳಿತಾರೂಢ ಬಿಜೆಪಿ ಸರ್ಕಾರ ಆರೋಪಿ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಎಚ್ಚರಿಸಿದ್ದಾರೆ.
ಆರೋಪಿ ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರಿಗೆ ರಾಜಕೀಯ ಸಂಪರ್ಕವಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಸ್ಯಾಂಟ್ರೋ ರವಿಗೆ ಬಿಜೆಪಿ ಸರ್ಕಾರದ ಎಲ್ಲಾ ಸಚಿವರ ಜೊತೆಗೆ ಸಂಪರ್ಕವಿದೆ ಎಂದು ಆರೋಪಿಸಿದ್ದಾರೆ.
ಆರೋಪಿಯ, ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಅಗೌರವದಿಂದ ಮಾತನಾಡಿರುವ ಆಡಿಯೋ ಕ್ಲಿಪ್ ಕೂಡ ವೈರಲ್ ಆಗಿದೆ.
ಸಂಭಾಷಣೆಯಲ್ಲಿ, ಆತ ತನ್ನನ್ನು 'ಸರ್' ಎಂದು ಸಂಬೋಧಿಸುವಂತೆ ಪೊಲೀಸ್ ಅಧಿಕಾರಿಗೆ ಕೇಳಿರುವುದು ಮತ್ತು ಮುಖ್ಯಮಂತ್ರಿ ಕೂಡ ತನ್ನನ್ನು 'ಸರ್' ಎಂದು ಸಂಬೋಧಿಸುತ್ತಾರೆ ಎಂದು ಹೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


