ರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗುರುವಾರ ಪರಿಶೀಲಿಸಿದರು.

ರಾಮನಗರ: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗುರುವಾರ ಪರಿಶೀಲಿಸಿದರು. ಸಚಿವ ಗೋಪಾಲಯ್ಯ ಅವರೊಡನೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ಒಟ್ಟು 9 ಎಕರೆ 35 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಈ ಜಮೀನು ಸರಕಾರದ್ದೇ ಆಗಿರುವುದರಿಂದ ಯಾವ ಸಮಸ್ಯೆಯೂ ಇಲ್ಲ. ಹೀಗಾಗಿ ಸ್ನಾತಕೋತ್ತರ ಕೇಂದ್ರದ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಸ್ನಾತಕೋತ್ತರ ಕೇಂದ್ರಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸೂಕ್ತ ಸಂಪರ್ಕ ಕಲ್ಪಿಸಲಾಗುವುದು. ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವಿನಾಶ್, ಜಿಪಂ ಸಿಇಒ ದಿಗ್ವಿಜಯ್ ಘೋಡ್ಕೆ, ಎಸ್ಪಿ ಸಂತೋಷ್ ಬಾಬು, ಉಪ ವಿಭಾಗಾಧಿಕಾರಿ ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


