ಸಚಿವ ಸಂಪುಟ ನೀಡಿದ 2ಡಿ ಮೀಸಲಾತಿ ತಿರಸ್ಕರಿಸಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.
ಇಂದು ಬೆಳಗಾವಿಯಲ್ಲಿ 2ಡಿ ಮೀಸಲಾತಿ ವಿಚಾರವಾಗಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ಮುಂದಿನ 24 ಗಂಟೆಯಲ್ಲಿ ಸಿಎಂ ಬೊಮ್ಮಾಯಿ ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕು. ಸಿಎಂ ಮೀಸಲಾತಿ ನೀಡ್ತಿರೋ ಇಲ್ವೋ ಅಂತ ಹೇಳಬೇಕು. ಸಿಎಂ ಮಾತು ತಪ್ಪಿದ್ದಾರೆ ಎಂದು ಇಡೀ ಸಮಾಜದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಎಂದರು.
ಸಿಎಂ ಬೊಮ್ಮಾಯಿ ಮಾತಿಗೆ ಗೌರವ ಕೊಟ್ಟು ನಾವು ಹೋರಾಟವನ್ನು ತಾತ್ಕಾಲಿಕ ಸ್ಥಗಿತ ಮಾಡಿದ್ದೇವು. 2ಡಿ ಮೀಸಲಾತಿಯಿಂದ ನಮ್ಮ ಸಮುದಾಯದ ಜನ ಮತ್ತು ಆಡಳಿತ ಪಕ್ಷದ ಯಾವುದೇ ಶಾಸಕರು ಸಮಾಧಾನಗೊಂಡಿಲ್ಲ. ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲವಾದರೆ ಜನವರಿ 13ರಂದು ಶಿಗ್ಗಾಂವಿಯಲ್ಲಿ 30 ಸಾವಿರ ಜನ ಸೇರಿಸಿ ಹೋರಾಟ ಮಾಡುತ್ತೇವೆ. ಜನಶಕ್ತಿ ವ್ಯರ್ಥ ಮಾಡಲು ಬಿಡಲು ಸಾಧ್ಯವಿಲ್ಲ. ಈ ಜನ ಶಕ್ತಿಯೇ 2023ರ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


