ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮೆರೆದ ಸಮಯಪ್ರಜ್ಞೆಯಿಂದಾಗಿ ಸಂಭವೀಯ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಗುಜರಾತ್ ನಿಂದ ಬಂದಿದ್ದ ಪ್ರವಾಸಿ ಬಸ್ 50 ಮಂದಿಯನ್ನು ಹೊತ್ತು ಚಾಮುಂಡಿ ಬೆಟ್ಟಕ್ಕೆ ಸಾಗುತ್ತಿತ್ತು. ಈ ವೇಳೆ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ.
ಚಾಮುಂಡಿಬೆಟ್ಟ ಬಸ್ ನಿಲ್ದಾಣದ ಸಮೀಪ ಸಾಗುತ್ತಿದ್ದಾಗ ಬಸ್‌ನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದಂತೆ ಹೊಗೆ ಬರಲು ಆರಂಭವಾಗಿದೆ. ಬಳಿಕ ಪೈಪ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕತ್ತರಿಸಿದ್ದಾರೆ.
ಒಂದೊಮ್ಮೆ ತಿಳಿಯದೆ ಬಸ್ ಮುಂದೆ ಸಾಗಿದ್ದರೆ, ಬೆಂಕಿಗೆ ಕನೆಕ್ಟ್ ಅದ ಪೈಪ್‌ಗಳನ್ನು ಕತ್ತರಿಸದೆ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಚಾಲಕನ ಸಮಯಪ್ರಜ್ಞೆಯಿಂದಾಗಿ 50 ಮಂದಿಯ ಜೀವ ಉಳಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


