ವಿಧಾನಸೌಧಕ್ಕೆ ಹಣವನ್ನು ತಂದ ವ್ಯಕ್ತಿ ಯಾರಿಗೆ ಕೊಡಲು ಬಂದಿದ್ದ? PWD ಮಿನಿಸ್ಟರ್ ಗ ಇಲ್ಲಾ ಮುಖ್ಯಮಂತ್ರಿಗಳಿಗಾ?: ಸಿದ್ದರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕಳೆದ ಬುಧವಾರ ಸಂಜೆ ವಿಧಾನಸೌಧ ಪೂರ್ವ ದ್ವಾರದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಜಗದೀಶ್ ಎಂಬಾತ ಹತ್ತೂವರೆ ಲಕ್ಷ ರೂಪಾಯಿ ಬ್ಯಾಗಿನಲ್ಲಿ ತಂದು ಸಿಕ್ಕಿಹಾಕಿಕೊಂಡಿರುವ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದರ ಅರ್ಥ ವಿಧಾನಸೌಧದಲ್ಲೇ ಲಂಚದ ವ್ಯವಹಾರ ನಡಿಯುತ್ತಿದೆ ಎಂದು. ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ. ವಿಧಾನಸೌಧಕ್ಕೆ ಹಣವನ್ನು ತಂದ ವ್ಯಕ್ತಿ ಯಾರಿಗೆ ಕೊಡಲು ಬಂದಿದ್ದ PWD ಮಿನಿಸ್ಟರ್ ಗೆ ಕೊಡಲು ಬಂದಿರಬೇಕು, ಇಲ್ಲಾ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಅಲ್ವಾ..? ಎಂದು ಪ್ರಶ್ನೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


