ರಾಜ್ಯ

ಕೇಂದ್ರ ಸರ್ಕಾರದ ಸ್ವದೇಶ್ ದರ್ಶನ್ ಯೋಜನೆ: ಕರ್ನಾಟಕದ ಹಂಪಿ, ಮೈಸೂರು ಆಯ್ಕೆ

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದ್ದು, ಈ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಸ್ವದೇಶ್ ದರ್ಶನ್ ಯೋಜನೆ: ಕರ್ನಾಟಕದ ಹಂಪಿ, ಮೈಸೂರು ಆಯ್ಕೆ
ಸ್ವದೇಶ್ ದರ್ಶನ್ ಯೋಜನೆ
Published On :

ಬೆಂಗಳೂರು: ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದ್ದು, ಈ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ವದೇಶ್ ದರ್ಶನ್ 2.0 ಯೋಜನೆಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ್, ಚಂಡೀಗಢ, ಗೋವಾ, ಗುಜರಾತ್, ಕೇರಳ ರಾಜ್ಯಗಳ ತಲಾ ಎರಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿದೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯವು 2014-15 ರಲ್ಲಿ ಪ್ರಾರಂಭಿಸಿದ ಸ್ವದೇಶ್ ದರ್ಶನ್ 2.0 ಯೋಜನೆಯಲ್ಲಿ ಹಂಪಿ ಮತ್ತು ಮೈಸೂರು ಇರುವುದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದೆ ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ್ ಯೋಜನೆ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿದೆ. ವಿಭಿನ್ನ ವಿಷಯದ ಪ್ರವಾಸಿ ಸರ್ಕ್ಯೂಟ್‌ಗಳನ್ನು ಸಂಯೋಜಿಸುವ ಮೂಲಕ ಒಟ್ಟಾರೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು 2015 ರಲ್ಲಿ ಆರಂಭಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.