ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್
ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 'ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.
15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳ ಅಳಲು. ಅದು ಕೂಡ ಗಮನದಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ಪ್ರಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


