ರಾಜ್ಯ

ಬೆಂಗಳೂರು: ಪರಿಚಿತ ಮಹಿಳೆಯ ಖಾಸಗಿ ವಿಡಿಯೋ ವೈರಲ್ ಮಾಡಿ ಸೆಕ್ಸ್ ಗೆ ಒತ್ತಾಯ, ಆರೋಪಿ ಬಂಧನ

ಪರಿಚಿತ ಮಹಿಳೆಯ ಖಾಸಗಿ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮರ್ ಪರಿಮಣಿಕ ಬಂಧಿತ ಆರೋಪಿಯಾಗಿದ್ದು, ಹಲಸೂರಿನ ಬಾಡಿಗೆ ಮನೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು: ಪರಿಚಿತ ಮಹಿಳೆಯ ಖಾಸಗಿ ವಿಡಿಯೋ ವೈರಲ್ ಮಾಡಿ ಸೆಕ್ಸ್ ಗೆ ಒತ್ತಾಯ, ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪರಿಚಿತ ಮಹಿಳೆಯ ಖಾಸಗಿ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮರ್ ಪರಿಮಣಿಕ ಬಂಧಿತ ಆರೋಪಿಯಾಗಿದ್ದು, ಹಲಸೂರಿನ ಬಾಡಿಗೆ ಮನೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

ಬ್ಯೂಟಿ ಪಾರ್ಲರ್ ವೊಂದರಲ್ಲಿ ಕೋರ್ಸ್ ಕಲಿಯಲು ಬಂದಿದ್ದ ಮಹಿಳೆಗೆ ಆರೋಪಿ ಸಮರ್ ಬ್ಯೂಟಿ ಪಾರ್ಲರ್‌ಗೆ ಗ್ರಾಹಕನಾಗಿ ಬಂದು ಪರಿಚಯಮಾಡಿಕೊಂಡಿದ್ದ. ಒಂದೂವರೆ ವರ್ಷದ ಪರಿಚಯ ಸ್ನೇಹವಾಗಿತ್ತು. ಇದಾದ ಬಳಿಕ ಮಹಿಳೆಯ ಖಾಸಗಿ ಫೋಟೋ, ವಿಡಿಯೋವನ್ನು ಸಂಗ್ರಹಿಸಿದ್ದ ಎನ್ನಲಾಗಿದೆ.

ಆರೋಪಿಯು ಮಹಿಳೆಗೆ  ಹಣ ನೀಡುವಂತೆ ಪದೇಪದೆ ಪೀಡಿಸುತ್ತಿದ್ದ. ಒತ್ತಡಕ್ಕೆ ಮಹಿಳೆ ಮಣಿಯದಿದ್ದಾಗ ಆಕೆಯ ಖಾಸಗಿ ವಿಡಿಯೋ ವೈರಲ್ ಮಾಡಿದ್ದಾನೆ ಎನ್ನಲಾಗಿದೆ.  ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ಮಹಿಳೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.