ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಸ್ನೈಪರ್ ಡಾಗ್ ಮೇಲೆ ಹರಿದ ಲಾರಿ, ಸಾವು
ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ (ಬಿಆರ್‌ಟಿ) ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯೋಜನೆಗೊಂಡಿದ್ದ ಅರಣ್ಯ ಇಲಾಖೆಯ ಸ್ನಿಫರ್ ಡಾಗ್ ಝಾನ್ಸಿ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೈಸೂರು: ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ (ಬಿಆರ್‌ಟಿ) ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯೋಜನೆಗೊಂಡಿದ್ದ ಅರಣ್ಯ ಇಲಾಖೆಯ ಸ್ನಿಫರ್ ಡಾಗ್ ಝಾನ್ಸಿ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಡಿಸೆಂಬರ್ 30ರಂದು ಪುಣಜನೂರು ಕಚೇರಿ ಎದುರು ಇರುವ ರಸ್ತೆಯಲ್ಲಿ ಬೀದಿನಾಯಿ ಅಟ್ಟಿಸಿಕೊಂಡು ಹೋದ ಝಾನ್ಸಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
20 ಬೀದಿನಾಯಿಗಳು ಝಾನ್ಸಿ ಮೇಲೆ ದಾಳಿ ನಡೆಸಲು ಯತ್ನ ನಡೆಸಿದವು. ಈ ವೇಳೆ ಗಾಬರಿಗೊಂಡ ಝಾನ್ಸಿ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಲು ಆರಂಭಿಸಿದರು. ಬೀದಿ ನಾಯಿಗಳ ಓಡಿಸಲು ನಿರ್ವಾಹಕರು ಪ್ರಯತ್ನಿಸಿದರೂ, ನಾಯಿಗಳು ಬೊಗಳುವುದನ್ನು ನಿಲ್ಲಿಸಲಿಲ್ಲ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಝಾನ್ಸಿಗೆ ಮುಖ್ಯರಸ್ತೆಯಲ್ಲಿ ಲಾರಿ ಚಕ್ರಕ್ಕೆ ಸಿಲುಕಿದ್ದಳು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ..
ಸರ್ಕಾರೇತರ ಸಂಸ್ಥೆಯಾದ ಟ್ರಾಫಿಕ್ ಮತ್ತು ವಿಶ್ವ ವನ್ಯಜೀವಿ ನಿಧಿ(ವರ್ಲ್ಡ್ ವೈಲ್ಡ್ಲೈಫ್ ಫಂಡ್) ಇಂಡಿಯಾ ವತಿಯಿಂದ ಚಂಡೀಗಢ ಇಂಡೋ - ಟಿಬೇಟಿನ್ ಬಾರ್ಡರ್ ಪೊಲೀಸ್ ಪೋರ್ಸ್ (ಐಟಿಬಿಪಿ) ನಲ್ಲಿ ಝಾನ್ಸಿ ಸುಮಾರು ಆರೇಳು ತಿಂಗಳು ಕಠಿಣ ತರಬೇತಿ ಪಡೆದು ಬಂದಿದ್ದಳು. ಝಾನ್ಸಿ ನೋಡಿಕೊಳ್ಳಲು ಅರಣ್ಯ ಇಲಾಖೆ ಗಾರ್ಡ್ ಬಸವರಾಜುಗೆ ಹ್ಯಾಂಡ್ಲರ್ ತರಬೇತಿಯನ್ನೂ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


