ಮೆಟ್ರೊ ಪಿಲ್ಲರ್ ಕುಸಿದು ತಾಯಿ-ಮಗು ಸಾವು, ಇದು 40% ಸರ್ಕಾರದ ಫಲಿತಾಂಶ: ಡಿ ಕೆ ಶಿವಕುಮಾರ್
ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಬೆಳಗ್ಗೆ ಕುಸಿದು ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮತ್ತು ಇನ್ನೊಬ್ಬ ಮಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಬೆಳಗ್ಗೆ ಕುಸಿದು ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮತ್ತು ಇನ್ನೊಬ್ಬ ಮಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಡಿ ಕೆ ಶಿವಕುಮಾರ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು 40% ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ. ಸರ್ಕಾರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಗುಣಮಟ್ಟವಿಲ್ಲ. ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು ತಾವು ದುಡ್ಡು ಮಾಡಿಕೊಂಡು ಜನರಿಗೆ ಕಳಪೆ ಮಟ್ಟದ ಕೆಲಸ ಮಾಡಿಕೊಡುತ್ತಾರೆ. ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯವಲ್ಲದೆ ಇನ್ನೇನು, ಸಾಮಾನ್ಯ ಜನರ ಜೀವನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


