ಶೀಘ್ರವೇ ಸ್ಯಾಂಟ್ರೋ ರವಿ ಬಂಧನ, ದಾಖಲಾಗಿರುವ ಪ್ರಕರಣಗಳ ಬಗ್ಗೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆ ಬೇರೆ ಆಯಾಮದಲ್ಲಿ ತನಿಖೆ ಆಗುತ್ತಿದ್ದು, ಎಲ್ಲಾ ರೀತಿಯ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುತ್ತದೆ. ಆತನ ಮೇಲೆ ದಾಖಲಾಗಿರುವ ಪ್ರತಿಯೊಂದು ಪ್ರಕರಣಗಳನ್ನು ತನಿಖೆ ಮಾಡುತ್ತೇವೆ ಎಂದರು.
ಮಹಿಳೆ ಮೇಲೆ ಸುಳ್ಳು ಕೇಸ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಕರಣ ದಾಖಲಿಸಿ ಬಂಧನ ಮಾಡಿರುವುದು ಗೊತ್ತಾಗಿದೆ. ಈಗಾಗಲೇ ವರದಿ ಸಿದ್ದಪಡಿಸಲಾಗಿದೆ. ಈ ಸಂಬಂಧ ಕಾನೂನು ಕ್ರಮ ಆಗುತ್ತದೆ. ಯಾವ ಅಧಿಕಾರಿ ಇದ್ದರೋ ಅವರ ವಿರುದ್ಧ ಕ್ರಮ ಅಗುತ್ತದೆ ಎಂದರು.
ಸರ್ಕಾರವೇ ಸ್ಯಾಂಟ್ರೋ ರವಿಯನ್ನು ಬಚ್ಚಿಟ್ಟಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಮಾತಿಗೆ ನಾನು ಏನೂ ಹೇಳಲ್ಲ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದಾರೆ. ಅವನನ್ನು ಬಂಧನ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅತಿ ಶೀಘ್ರವೇ ಆತನ ಬಂಧನ ಆಗುತ್ತದೆ ಎಂದರು.
ಇನ್ನು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಯಾಂಟ್ರೊ ರವಿ ವಿರುದ್ಧ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆತನಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ. ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೆ ಆದೇಶಿಸಿದ್ದೇನೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿತ್ತು. ಆದರೆ ಇದೆಲ್ಲ ಕಾಂಗ್ರೆಸ್ ಕಾಲದಲ್ಲಿ ನಡೆದಿರುವುದು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಬಿಡುಗಡೆಯಾಗಿದ್ದ. ಸ್ಯಾಂಟ್ರೋ ರವಿದ್ದು 20 ವರ್ಷದ ಇತಿಹಾಸ ಇದೆ. ಯಾವ ಯಾವ ಸರ್ಕಾರ ಇತ್ತು, ಯಾವ ಯಾವ ಮಂತ್ರಿಗಳಿದ್ದರೂ, ಯಾರ ಜೊತೆ ಸಂಬಂಧ ಇತ್ತು ಎಲ್ಲವೂ ತನಿಖೆ ಆಗಲಿದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


