ರಾಜ್ಯ

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ.

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ
Published On :

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ. 

ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಇಂದು ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ವೇಳೆ ದಿಢೀರ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಅಸ್ತಂತರಾಗಿದ್ದಾರೆ.

ಫೆಬ್ರವರಿ 25ರಂದು ತಮ್ಮ ಪಟ್ಟಾಧಿಕಾರ ಮಹೋತ್ಸವ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಬಿ.ವೈ ವಿಜಯೇಂದ್ರ ಅವರಿಗೆ ಆಹ್ವಾನ ನೀಡಲು ಬೆಂಗಳೂರಿಗೆ ಆಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.