ರಾಷ್ಟ್ರೀಯ ಯುವ ಜನೋತ್ಸವ: ಹುಬ್ಬಳ್ಳಿಗೆ ಬಂದಿಳಿದ ಪ್ರಧಾನಿ ಮೋದಿ, ಅದ್ದೂರಿ ರೋಡ್ ಶೋ
ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ವಾಯುಸೇನೆ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ನಂತರ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯಲಿರುವ ರೈಲ್ವೆ ಮೈದಾನದವರೆಗೂ ಮೋದಿ ಅದ್ದೂರಿ ರೋಡ್ ಶೋ ನಡೆಸಿದರು. ಗೋಕುಲ್ ರೋಡ್, ಅಕ್ಷಯ ಪಾರ್ಕ್ , ಹೊಸೂರು ಸರ್ಕಲ್ , ದೇಶಪಾಂಡೆ ನಗರ ಮೂಲಕ ರೋಡೋ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಸಂಖ್ಯೆಯ ಜನರು, ಮೋದಿ ಮೋದಿ ಎಂಬ ಹರ್ಷೋದ್ಘಾರ ಕೂಗುತ್ತಾ ಸ್ವಾಗತ ಕೋರಿದರು.
ಮಾರ್ಗ ಮಧ್ಯದಲ್ಲಿ ಕಾರು ನಿಲ್ಲಿಸಿದ ಮೋದಿ, ಜನರತ್ತ ಕೈ ಬೀಸಿ ಧನ್ಯವಾದ ಸಲ್ಲಿಸಿದರು. ಮೋದಿ ರೋಡೋ ಶೋ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ಕಟ್ಟಡಗಳ ಮೇಲೆ ಜನಸ್ತೋಮ ಕಂಡುಬಂದಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


