ಮಂಗಳೂರು: ಗಾಂಜಾ ಪ್ರಕರಣ ಸಂಬಂಧ ವೈದ್ಯ ವಿದ್ಯಾರ್ಥಿ ಸೇರಿ ಮತ್ತೆ ಮೂವರ ಬಂಧನ
ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ.
ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂಡಿ ಓದುತ್ತಿರುವ ತುಮಕೂರಿನ ಡಾ.ಹರ್ಷ ಕುಮಾರ್, ಡಿ ಫಾರ್ಮಾ ವಿದ್ಯಾರ್ಥಿಯಾಗಿರುವ ಕೇರಳದ ಕೊಚ್ಚಿಯ ಅಡಾನ್ ದೇವ್, ಮಂಗಳೂರು ಕಸಬ ಬೆಂಗ್ರೆಯ ಮಹಮ್ಮದ್ ಅಫ್ರಾರ್ ಬಂಧಿತರು.
ಮಹಮ್ಮದ್ ಅಫ್ರಾರ್ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬುಧವಾರ 10 ಮಂದಿಯನ್ನು ಬಂಧಿಸಲಾಗಿತ್ತು, ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 13ಕ್ಕೇರಿದೆ.
ಇಂಗ್ಲೆಂಡ್ ನಿವಾಸಿಯಾಗಿದ್ದ ಆತ ಅನಿವಾಸಿ ಭಾರತೀಯ ಕೋಟಾ ಅಡಿ 15 ವರ್ಷಗಳಿಂದ ನಗರದಲ್ಲಿ ವಾಸವಾಗಿರುವುದು ಹಾಗೂ ನಗರದ ಪ್ರತಿಷ್ಠಿತ ದಂತ ವೈದ್ಯ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವುದು ಕಂಡು ಬಂದಿತ್ತು. ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಬ್ಬರು ವೈದ್ಯರು, ಏಳು ಜನ ವೈದ್ಯಕೀಯ ವಿದ್ಯಾರ್ಥಿಗಳ ಸಹಿತ ಪೊಲೀಸರು 10 ಜನರನ್ನು ಬಂಧಿಸಿದ್ದರು. ಈಗ ಮತ್ತೆ ಮೂವರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


