ರಾಜ್ಯ

ಬೆಂಗಳೂರು: 500 ಕೋಟಿ ರು. ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ

500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: 500 ಕೋಟಿ ರು. ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್  ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು  ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ ಮೂಲದ ಮಹೇಶ್ ಭೂಪತ್​ ಕುಮಾರ್​ ಓಜಾ ರನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ.

ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕದಲ್ಲಿ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಅಲ್ಲದೇ ಈ ಹಿಂದೆ ಮಹೇಶ್ ಭೂಪತ್​ ಕುಮಾರ್​ ಓಜಾರನ್ನು ಸಿಐಡಿ ಬಂಧಿಸಿತ್ತು.

ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.