ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು ಸಿದ್ಧತೆ!
ಎಚ್‌ಬಿಆರ್ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಎಚ್‌ಬಿಆರ್ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು, ಎಚ್‌ಬಿಆರ್ ಲೇಔಟ್‌ನ ಹೊರ ವರ್ತುಲ ರಸ್ತೆಯಲ್ಲಿ ಪಿಲ್ಲರ್‌ಗೆ ತಯಾರಾಗಿದ್ದ ಕಬ್ಬಿಣದ ಸರಳುಗಳ ಎತ್ತರವನ್ನು ಕಡಿಮೆ ಮಾಡಲಾಗಿದೆ. ಈ ರಚನೆಗಳು 10 ಮೀ ಮೀರಬಾರದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆಲ್ಲದೆ, ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿತ್ತಿರುವುದಾಗಿ ತಿಳಿಸಿದ್ದಾರೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ಸ್ಥಳದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಗಳಿಗೆ ಭೇಟಿ ನೀಡಿ ಎಂಜಿನಿಯರ್‌ಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಅಪಘಾತದ ಸ್ಥಳದಲ್ಲಿ ತಾಂತ್ರಿಕ ತನಿಖೆಗಾಗಿ ಪೊಲೀಸರು ಸ್ವತಂತ್ರ ಸಂಸ್ಥೆಗಳ ಸಹಾಯವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


