ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು
ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಚಾಮರಾಜನಗರ: ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ.
ಅಧಿಕಾರಿಗಳು ರೈತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆ 2018ರಲ್ಲಿ ಇದೇ ಜಮೀನಿನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಕೃಷಿ ಭೂಮಿಗೆ ನುಗ್ಗಿ ಮೃತಪಟ್ಟಿತ್ತು ಎಂದು ಅರಣ್ಯಾಧಿಕಾರಿಗಳು ವಿವರಿಸಿದ್ದಾರೆ.
ಸದ್ಯ 25 ವರ್ಷದ ಹೆಣ್ಣು ಆನೆ ಸಾವನ್ನಪ್ಪಿದ್ದು, ತನಿಖೆ ನಡೆಯುತ್ತಿದೆ.
ಈ ಪ್ರದೇಶದಲ್ಲಿ ಮಾನವ- ಪ್ರಾಣಿ ಸಂಘರ್ಷ ಉಲ್ಬಣಗೊಂಡಿದ್ದು, ಕಾಡುಪ್ರಾಣಿಗಳು ಹಾಗೂ ಮನುಷ್ಯರ ಸಾವು ಸಂಭವಿಸಿದೆ.
ರಾಜ್ಯದ ಗ್ರಾಮಗಳಿಂದ ಆನೆಗಳನ್ನು ಓಡಿಸಲು ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


