ರಾಜ್ಯ

ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ, ಮತ್ತಿಬ್ಬರ ತೀವ್ರ ವಿಚಾರಣೆ

ನಿನ್ನೆ ಗುಜರಾತ್‌ನಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೋ ರವಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

ಮೈಸೂರು: ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ, ಮತ್ತಿಬ್ಬರ ತೀವ್ರ ವಿಚಾರಣೆ
ಸ್ಯಾಂಟ್ರೋ ರವಿ (ಸಂಗ್ರಹ ಚಿತ್ರ)
Published On :

ಮೈಸೂರು: ನಿನ್ನೆ ಗುಜರಾತ್‌ನಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೋ ರವಿ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಮೈಸೂರು ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

ಬಂಧಿತ ಸ್ಯಾಂಟ್ರೋ ರವಿ ಜೊತೆ,  ರಾಮ್‌ಜಿ ಮತ್ತು ಶ್ರುತೇಶ್ ಕುಮಾರ್ ಎಂಬುವರನ್ನು ಬಂಧಿಸಿರುವ ನಗರ ಪೊಲೀಸರು ಶನಿವಾರ ಬೆಳಗ್ಗೆ ವಿಜಯನಗರ ಠಾಣೆಗೆ ಕರೆತಂದಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ವಿಜಯನಗರ ಠಾಣೆಗೆ ಕರೆತರಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ತನಿಖಾಧಿಕಾರಿ ಎಸಿಪಿ ಶಿವಶಂಕರ್ ಅವರು ಬಂಧಿತರನ್ನು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಪೌರಾಯುಕ್ತ ಬಿ ರಮೇಶ್, ಎಡಿಜಿಪಿ ಅಲೋಕ್ ಕುಮಾರ್ ಉಪಸ್ಥಿತರಿದ್ದರು. ಆರೋಪಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೂವರನ್ನು ಮಧ್ಯಾಹ್ನ 12.30ರ ನಂತರ ಆರನೇ ಎಡಿಜೆ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.