ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆ
ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್ನಲ್ಲಿ ನಡೆದಿದೆ.

ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್ನಲ್ಲಿ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದರಿಂದ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


