ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಶುಲ್ಕ ಪಾವತಿಸಬೇಕು!
ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.

ಮಂಗಳೂರು: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ಪಾವತಿಸಬೇಕಾಗುತ್ತದೆ.
ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್ ಅನ್ನು ನಿರ್ಗಮನ ಪ್ರಯಾಣಿಕರು ಮಾತ್ರ ಪಾವತಿಸುತ್ತಿದ್ದಾರೆ. ಆದರೆ, ಫೆಬ್ರವರಿಯಿಂದ ಆಗಮನ ಪ್ರಯಾಣಿಕರು ಕೂಡ ಈ ಶುಲ್ಕ ಪಾವತಿಸಬೇಕಿದೆ.
ಮೊದಲ ಬಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅಭಿವೃದ್ಧಿ ಶುಲ್ಕವನ್ನು ವಿಧಿಸಲು ಮತ್ತು ನಿರ್ಗಮಿಸುವ ಪ್ರಯಾಣಿಕರ ಮೇಲೆ ಅಭಿವೃದ್ಧಿ ಶುಲ್ಕವನ್ನು ಹೆಚ್ಚಳ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿದೆ.
ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂತರಾಷ್ಟ್ರೀಯ ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,105 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು, ಮುಂದಿನ ವರ್ಷ ಮಾರ್ಚ್ ಬಳಿ ಕ 240 ಪಾವತಿಸಬೇಕಾಗಿದೆ.
ಕಳೆದ 12 ವರ್ಷದಿಂದ ಬಳಕೆದಾರರ ಶುಲ್ಕವನ್ನು ಏರಿಕೆ ಮಾಡಿರಲಿಲ್ಲ. ಈಗ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮೇಲ್ದರ್ಜೆಗೇರಿಸುವುದು, ರನ್‌ವೇ ವಿಸ್ತರಣೆ ಸಹಿತ ವಿವಿಧ ಅಭಿವೃದ್ಧಿ ನಡೆಸುವ ಕಾರಣದಿಂದ ಶುಲ್ಕ ಏರಿಕೆಗೆ ನಿರ್ಧರಿಸಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.
ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗಿರುವ ದರವು ಫೆಬ್ರವರಿ ಹಾಗೂ ಮಾರ್ಚ್‌ಗೆ ಮಾತ್ರ ಅನ್ವಯವಾಗುವಂತೆ 80 ರೂ. ಇಳಿಕೆಯಾಗಲಿದ್ದು, ಎಪ್ರಿಲ್‌ನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


