ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ, ಗೂಳಿ ತಿವಿದು ಇಬ್ಬರ ದುರ್ಮರಣ
ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ.

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಈ ಅನಾಹುತ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಂಗನಾಥ್ ಎಂಬವರು ಮೃತಪಟ್ಟಿದ್ದಾರೆ. ಸ್ಪರ್ಧೆ ನೋಡಲು ಹೋಗಿದ್ದಾಗ ಹೋರಿ ತಿವಿದು ಮೃತಪಟ್ಟಿದ್ದಾರೆ. ಅಲ್ಲದೆ ಮಾಳೂರಿನಲ್ಲಿ ಇನ್ನೂ ಇಬ್ಬರಿಗೆ ಗಾಯಗಳಾಗಿವೆ.
ಇದೇ ವೇಳೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಅಲ್ಕೊಳ ನಿವಾಸಿ 32 ವರ್ಷದ ಲೋಕೇಶ್ ಮೃತಪಟ್ಟಿದ್ದಾರೆ. ಹೋರಿ ತಿವಿತದಿಂದ ಗಾಯಗೊಂಡಿದ್ದ ಆಟೋ ಚಾಲಕರಾಗಿದ್ದ ಲೋಕೇಶ್ ಆವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


