ರಾಷ್ಟ್ರೀಯ ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು...' ಹಾಡು ಹಾಡಿದ ಸಚಿವ ಪ್ರಹ್ಲಾದ್ ಜೋಶಿ
ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್ಕುಮಾರ್ ಅವರ ಜನಪ್ರಿಯ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಧಾರವಾಡ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್ಕುಮಾರ್ ಅವರ ಜನಪ್ರಿಯ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.
ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವಜನೋತ್ಸವದಲ್ಲಿ ಆಲ್ ಒಕೆ ತಂಡಕ್ಕೆ ಜೋಶಿ ನೆನಪಿನ ಕಾಣಿಕೆ ಕೊಡಲು ವೇದಿಕೆ ಮೇಲೆ ಆಗಮಿಸಿದ್ದರು.
ಈ ವೇಳೆ ತಂಡದ ಸದಸ್ಯರು ಅವರನ್ನು ಹಾಡಲು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಜೋಶಿಯವರು, 'ನಾನು ವೇದಿಕೆ ಮೇಲೆ ಮೆಮೆಂಟೊ ಕೊಡಲು ಬಂದಿದ್ದೆ. ಆದರೆ, ನನಗೆ ಹಾಡಬೇಕೆಂಬ ಪನಿಶ್ಮೆಂಟ್ ಕೊಡುತ್ತಿದ್ದಾರೆ' ಎಂದು ಹೇಳಿದರು. ನಂತರ ಗಾಯಕರೊ ಜೊತೆಗೂಡಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಸಂತಸದಿಂದ ಹಾಡಿದರು.
ಧಾರವಾಡದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಯುವಜನೋತ್ಸವ ಕಾರ್ಯಕ್ರಮ ಇಂದು ಕೊನೆಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಕೆಸಿಡಿ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಹಾಗು ಅನುರಾಗ್ ಸಿಂಗ್ ಠಾಕೂರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


