ರಾಜ್ಯ

ಬಾಗಲಕೋಟೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ವಯಸ್ಸಿಗೆ ಬಂದ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ನಡೆದಿದೆ.

ಬಾಗಲಕೋಟೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮಕ್ಕಳೊಂದಿಗೆ ಮಹಿಳೆ
Published On :

ಬಾಗಲಕೋಟೆ: ಮಹಿಳೆಯೊಬ್ಬರು ವಯಸ್ಸಿಗೆ ಬಂದ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮ ಬಳಿಯ ಘಟಪ್ರಭಾ ನದಿಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೂಳೆಬಾವಿ ಗ್ರಾಮದ ಉಮಾ ಮಾಸರೆಡ್ಡಿ(42) ಹಾಗೂ ಪುತ್ರಿಯರಾದ ಐಶ್ವರ್ಯ(20), ಸೌಂದರ್ಯ(18) ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಕಮತಗಿ ಬಳಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲಪ್ರಭಾ ಸೇತುವೆ ಬಳಿ ಮೂವರ ಶವ ಪತ್ತೆಯಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಲಪ್ರಭಾ ನದಿಯಿಂದ ಶವಗಳನ್ನು ಹೊರತೆಗೆದರು. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓರ್ವ ಪುತ್ರಿ ಐಶ್ವರ್ಯ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಹಾಗೂ ಮತ್ತೊರ್ವ ಪುತ್ರಿ ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.