ಎಂಇಎಸ್'ನಿಂದ ಹುತಾತ್ಮ ದಿನ ಆಯೋಜನೆ: ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ, ಭೇಟಿ ರದ್ದುಗೊಳಿಸಿದ ಸಂಸದ ಧೈರ್ಯಶೀಲ ಮಾನೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿಂಸಾಚಾರದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸದಸ್ಯರು ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಿದರು.
ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಬರುವಂತೆ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆಗೆ ಅವರಿಗೆ ಆಹ್ವಾನ ನೀಡಿತ್ತು. ಇದರಂತೆ ಬೆಳಗಾವಿ ಪ್ರವಾಸದ ಪಟ್ಟಿಯನ್ನೂ ಸಂಸದರು ಬಿಡುಗಡೆ ಮಾಡಿದ್ದರು.
ಆದರೆ, ಸಂಸದರ ಭೇಟಿಯಿಂದ ಬೆಳಗಾವಿಯಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಸದ ಧೈರ್ಯಶೀಲ ಅವರ ಪ್ರವೇಶಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರು.
ಕಲಂ 144 ಸೆಕ್ಷನ್ ಅಡಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಂಸದರ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಧೈರ್ಯಶೀಲ ಮಾನೆ ಅವರು ಬೆಳಗಾವಿ ಭೇಟಿಯನ್ನು ರದ್ದುಪಡಿಸಿದರು.
ಈ ನಡುವೆ ನಿತೀಶ್ ಪಾಟೀಲ್ ಅವರ ನಿರ್ಧಾರವನ್ನು ಖಂಡಿಸಿದ ಎಂಇಎಸ್ ಪುಂಡರು, ಮರಾಠಿ ಭಾಷಿಕ ಜನತೆಯೆಲ್ಲರೂ ‘ಹುತಾತ್ಮ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು. ಧೈರ್ಯಶೀಲ ಮಾನೆ ಅವರು ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


