ರಾಜ್ಯ

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್ ಸಲ್ಲಿಕೆ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್ ಸಲ್ಲಿಕೆ
ಪ್ರವೀಣ್‌ ನೆಟ್ಟಾರು
Published On :

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 

ಎನ್​ಐಎ ಅಧಿಕಾರಿಗಳು ಇಂದು ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಇನ್ನು ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್​ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.