ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್ಟಿಸಿಎ, ಪರಿಸರ ಸಚಿವಾಲಯ!
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ.

ಬೆಂಗಳೂರು: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ. ಇದೇ ವೇಳೆ ಹುಲಿಗಳಲ್ಲದೆ ಚಿರತೆ, ಆನೆಗಳ ಸಂಘರ್ಷ ಪ್ರಕರಣಗಳು ಕುರಿತು ವರದಿ ನೀಡುವಂತೆ ಸೂಚಿಸಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇತ್ತೀಚೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಎನ್ಟಿಸಿಎ ಸಭೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಲಾಯಿತು. ಮಾನವ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ಸಲುವಾಗಿ ವಯನಾಡಿನಲ್ಲಿ ಹುಲಿಗಳನ್ನು ಕೊಲ್ಲಲು ಕೇರಳ ಸರ್ಕಾರವು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಈ ವಿಷಯವು ಮಹತ್ವ ಪಡೆದುಕೊಂಡಿದೆ.
ಹುಲಿಗಳು ಮತ್ತು ಇತರ ವನ್ಯಜೀವಿಗಳ ಸಾವುಗಳನ್ನು ನಿರ್ಣಯಿಸಲು ಸಮಿತಿಯನ್ನು ಸಹ ರಚಿಸಲಾಗುತ್ತಿದೆ ಎಂದು ಎನ್ಟಿಸಿಎಯ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. 'ಘರ್ಷಣೆಗಳನ್ನು ನಿಯಂತ್ರಿಸಲು ಸರ್ಕಾರವು ಏನು ಮಾಡುತ್ತಿದೆ. ಸಂಘರ್ಷಗಳ ಸಂಖ್ಯೆಗಳು, ಸಾವುಗಳು ಮತ್ತು ಕಾರಣಗಳ ದತ್ತಾಂಶವನ್ನು ತಿಳಿಯಲು ವರದಿಯನ್ನು ಕೇಳಲಾಗಿದೆ. ಇನ್ನು ಪ್ರಾಣಿಯನ್ನು ಸೆರೆಹಿಡಿದು, ಪ್ರಾಣಿ ಸಂಗ್ರಹಾಲಯಗಳು ಅಥವಾ ರಕ್ಷಣಾ ಕೇಂದ್ರಗಳಿಗೆ ಕಳುಹಿಸುವ ಬಗ್ಗೆ ಗಮನಿಸಲಾಗಿದೆ. ಅದಕ್ಕಾಗಿ ಕಿರು ಅರಣ್ಯಗಳನ್ನು ನಿರ್ಮಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.
ಮಾನುಷ್ಯ-ಪ್ರಾಣಿ ಸಂಘರ್ಷಗಳಿಗೆ ಹೆಚ್ಚಿನ ಸಂದರ್ಭಗಳಲ್ಲಿ, ಅರಣ್ಯ ಒತ್ತುವರಿ. ಬಫರ್ ವಲಯಗಳ ಅನುಪಸ್ಥಿತಿ, ಭೂ ವಿಚಲನ, ಜನರಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಪ್ರಾಣಿಗಳ ಜನಸಂಖ್ಯೆಯ ಹೆಚ್ಚಳವು ಕಾರಣಗಳು ಎಂದು ನಿಕಟ ಮೌಲ್ಯಮಾಪನವು ತೋರಿಸಿದೆ ಎಂದು ಅಧಿಕಾರಿ ಹೇಳಿದರು. ಆದ್ದರಿಂದ ಪ್ರತಿಯೊಂದರಲ್ಲೂ ನಿಕಟ ಮೌಲ್ಯಮಾಪನ ಅಗತ್ಯವಿದೆ. ಸರ್ಕಾರ ಇದುವರೆಗೆ ಯಾವ ಜಾಗೃತಿ, ಶಿಕ್ಷಣ ಮತ್ತು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಇದು ಏಕೆ ವಿಫಲವಾಗಿದೆ ಎಂಬುದನ್ನು ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.
ಚಿರತೆ, ಹುಲಿ, ಆನೆಗಳ ಸಾವು ಹೆಚ್ಚಿದ್ದರೂ ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಇದು ಕಡಿಮೆ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ. ಆದರೆ ಇದು ಸಹ ಆತಂಕಕಾರಿ ಸಂಗತಿ ಎಂದು ಅಧಿಕಾರಿಗಳು ಕೂಡ ದನಿಗೂಡಿಸಿದರು. ಇನ್ನು ವಯನಾಡ್ ಯೋಜನೆಯನ್ನು ಕರ್ನಾಟಕದಲ್ಲಿಯೂ ಯೋಚಿಸಬಾರದು ಏಕೆಂದರೆ ಇದು ವನ್ಯಜೀವಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


