ರಾಜ್ಯ

ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ
ಶಿವಾನಂದ ಪಾಟೀಲ್
Published On :

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ವಿಜಯಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಶಿವಾನಂದ ಪಾಲೀಟ್ ಅವರು ಮಧ್ಯಾಹ್ನ ಸಿಂದಗಿಗೆ ತೆರಳಿದ್ದರು. ಸಿಂದಗಿಯಲ್ಲಿ ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

54 ವರ್ಷದ ಶಿವಾನಂದ ಪಾಟೀಲ್ ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಭಾರತೀಯ ಸೇನೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ್ದ ಮಾಜಿ ಯೋಧ ಶಿವಾನಂದ ಪಾಟೀಲ್ ಅವರು ಇತ್ತೀಚಿಗೆ ರಾಜಕೀಯದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶಿವಾನಂದ ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.