ಅಕ್ರಮದ ಆರೋಪ, ತುಮಕೂರು ಜಿಲ್ಲಾ ಕಾರಾಗೃಹ ವಾರ್ಡನ್ ಅಮಾನತು- ಸಚಿವ ಆರಗ ಜ್ಞಾನೇಂದ್ರ
ಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.

ಬೆಂಗಳೂರು: ಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಸುದ್ದಿಗಾರ ರೊಂದಿಗೆ ಇಂದು ಮಾತನಾಡಿದ ಸಚಿವರು, ಇತ್ತೀಚೆಗೆ, ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹ ಗಳಲ್ಲಿ, ಕೆಲವು ಅಕ್ರಮ ಚಟುವಟಿಕೆ ಗಳ ಬಗ್ಗೆ, ವರದಿಯಾಗಿದ್ದು, ಇದರ ಬಗ್ಗೆ, ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್, ಪ್ರವೀಣ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು.
ಹಾಸನ ಜಿಲ್ಲಾ ಕಾರಾಗೃಹದ ಮೇಲೆ, ನಿನ್ನೆ, ಜಿಲ್ಲಾ ಪೊಲೀಸ್ ಸಿಬ್ಬಂದಿ, ದಿಡೀರ್ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಳ್ಳಲಾಗಿದ್ದ ಮೊಬೈಲ್ ಸೆಟ್ ಗಳನ್ನು ಸೀಜ್ ಮಾಡಿದ್ದಾರೆ. ಮೊಬೈಲ್ ಗಳನ್ನು ಜೈಲಿನೊಳಗೆ ಸಾಗಿಸಲು ಸಹಕರಿಸಿದ ಸಿಬ್ಬಂದಿ ಹಾಗೂ ಅದನ್ನು ಜೈಲಿನೊಳಗೆ ಉಪಯೋಗಿಸಿದ ಜೈಲು ಬಂಧಿಗಳ ವಿರುದ್ಧ, ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.
ಬೆಳಗಾವಿ ಕೇಂದ್ರ ಕಾರಾಗೃಹದಿಂದ ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಕೈದಿಯ ವಿರುದ್ಧವೂ ಮೊಕದ್ದಮೆ ದಾಖಲು ಮಾಡಲಾಗಿದೆ. ರಾಜ್ಯದ ಕಾರಾಗೃಹಗಳಲ್ಲಿ, ಅಕ್ರಮ ವಾಗಿ, ಮೊಬೈಲ್ ಉಪಯೋಗಿ ಸುವುದನ್ನು, ಪ್ರತಿಬಂಧಿಸಲು ಅತ್ಯಾಧುನಿಕ ಮೊಬೈಲ್ ಜಾಮರ್ ಗಳನ್ನು ಅಳವಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


