ರಾಜ್ಯ

ಬಾಗಲಕೋಟೆ: ಕೆಎಸ್​ಆರ್​ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ

ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ: ಕೆಎಸ್​ಆರ್​ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟ: ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಘಟಪ್ರಭಾ ಸೇತುವೆ ಮೇಲೆ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.