ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು
ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.
ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ ನಡೆದಿದೆ.
ವೈದ್ಯಕೀಯ ಪರೀಕ್ಷೆ ಬಳಿಕ ರವಿಯನ್ನು ವರ್ಗಾವಣೆ, ವೇಶ್ಯಾವಾಟಿಕೆ ಸಂಬಂಧ ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಪೊಲೀಸರು ಆತ ತನ್ನೆಲ್ಲಾ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದ ಶೇಷಾದ್ರಿಪುರಂ ಅಪಾರ್ಟ್ ಮೆಂಟ್ ನ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.
ಇದೇ ವೇಳೆ ರವಿ ವಿರುದ್ಧ ದೂರು ದಾಖಲಿಸಿದ್ದ ಆತನ 2ನೇ ಪತ್ನಿ ಸಹ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಡಿವೈಎಸ್ ಪಿ ನರಸಿಂಹಮೂರ್ತಿ ಹಾಗೂ ಮಹಿಳಾ ಅಧಿಕಾರಿ ನೇತೃತ್ವದಲ್ಲಿ ರವಿ ಪತ್ನಿಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


