ಬೆಂಗಳೂರಿನಲ್ಲಿ ಮತ್ತೊಂದು 'ನಮ್ಮ ಮೆಟ್ರೋ' ಅವಘಡ: ಕಾರಿನ ಮೇಲೆ ಬಿದ್ದ ಬ್ಯಾರಿಕೇಡ್, ಪ್ರಯಾಣಿಕರು ಪಾರು
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ.

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ.
ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ ಕಾರಿನ ಮೇಲೆ ಬಿದ್ದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ತಮ್ಮ ಹುಂಡೈ ಐ–10 ಕಾರಿನಲ್ಲಿ ಹೊರಟಿದ್ದರು. ಕಾರು ಚಲಿಸುತ್ತಿದ್ದ ಸಂದರ್ಭದಲ್ಲೇ ಬ್ಯಾರಿಕೇಡ್ ಬಿದ್ದಿತ್ತು. ಸ್ವಲ್ಪದರಲ್ಲೇ ಕಾರು ಮುಂದಕ್ಕೆ ಚಲಿಸಿದ್ದರಿಂದ, ಕಾರು ಭಾಗಶಃ ಜಖಂಗೊಂಡಿದೆ. ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದವರಿಗೆ ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ.
ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ; ಘಟನೆಗೆ ಸ್ಪಷ್ಟ ಕಾರಣ ತಿಳಿಸದೆ ಮೌನ ವಹಿಸಿದ ಬಿಎಂಆರ್ಸಿಎಲ್
ಈ ಬಗ್ಗೆ ಮಾಹಿತಿ ನೀಡಿರುವ ಸಂಚಾರ ಪೊಲೀಸರು, ‘ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಲಾಯಿತು. ಕಾರಿನ ಮಾಲೀಕರು ನೀಡುವ ದೂರು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


