ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿ; ಓರ್ವ ಸಾವು, ಐವರಿಗೆ ಗಾಯ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿಯಾದ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಕಬ್ಬು ತುಂಬಿದ್ದ ಎರಡು ಟ್ರಾಲಿಗಳನ್ನು ಟ್ರ್ಯಾಕ್ಟರ್ ಎಳೆದುಕೊಂಡು ಹೋಗುತ್ತಿದ್ದಾಗ ರಸ್ತೆ ತಿರುವಿನಲ್ಲಿ ಅಜ್ಜಪ್ಪ ಬಡಿಗೇರ್ ಎಂಬುವವರ ಒಡೆತನದ ಶೆಡ್ ಮೇಲೆ ಬಿದ್ದಿದೆ. ಶೆಡ್ ಕುಸಿದು ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.
ಮೃತರನ್ನು ಗಂಗವ್ವ ಕಮ್ಮಾರ್ (62) ಎಂದು ಗುರುತಿಸಲಾಗಿದೆ. ಅಲ್ಲದೇ ಮನೆಯೊಳಗೆ ಕಟ್ಟಿದ್ದ ಆರು ಮೇಕೆಗಳು ಅಪಘಾತದಲ್ಲಿ ಮೃತಪಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


