ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ: ಮಹಿಳೆ ಸಾವು
ರಸ್ತೆ ಕಾಮಗಾರಿಯಿಂದ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಬೆಂಗಳೂರು: ರಸ್ತೆ ಕಾಮಗಾರಿಯಿಂದ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಖಾಸಗಿ ಶಾಲೆಯ ಉದ್ಯೋಗಿ ನಳಿನಾ ಮೃತಪಟ್ಟವರು.ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯ ಬಳಿ ಇಂದು ಬೆಳಿಗ್ಗೆ ಸ್ಕೂಟರ್ ನಲ್ಲಿ ನಳಿನಾ ಅವರು ಹೋಗುತ್ತಿದ್ದಾಗ ರಸ್ತೆ ಕಾಮಗಾರಿಯ ಗುಂಡಿ ತಪ್ಪಿಸಲು ಹೋದಾಗ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ ಕೆಲತಿಂಗಳಿನಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು,ರಸ್ತೆ ಕಾಮಗಾರಿಯ ಗುಂಡಿ ತಪ್ಪಿಸಲು ವಾಹನ ಸವಾರರು ಅನಿವಾರ್ಯವಾಗಿ ಒನ್ ವೇ ರಸ್ತೆ ಬಳಸುತ್ತಿದ್ದಾರೆ. ಅದೇ ರೀತಿಯಲ್ಲಿ ಒನ್ ವೇ ಗೆ ನಳಿನಾ ಸ್ಕೂಟರ್ ಹೋಗುವಾಗ ಹಿಂದಿನಿಂದಿ ಬಂದ ಕ್ಯಾಂಟರ್ ತಲೆ ಮೇಲೆ ಹರಿದು ಸಾವನ್ನಪ್ಪಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಚಾಲಕನ್ನ ವಶಕ್ಕೆ ಪಡೆದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


