ಅನಾರೋಗ್ಯಕ್ಕೀಡಾದ ಮನುಷ್ಯರ ಸಾಗಿಸಲು ಜಾನುವಾರುಗಳ ಆ್ಯಂಬುಲೆನ್ಸ್ ಬಳಕೆ?: ಟೆಂಡರ್ ಪ್ರಕ್ರಿಯೆಯಲ್ಲಿ ದೋಷ ಎಂದ ಜಿವಿಕೆ-ಇಎಂಆರ್‌ಐ ಸಂಸ್ಥೆ
ಕರ್ನಾಟಕದಲ್ಲಿ 14 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಜಾನುವಾರುಗಳ ಆ್ಯಂಬುಲೆನ್ಸ್ ಸೇವೆಗಳನ್ನು ಒದಗಿಸುವ ಕಂಪನಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ದೋಷಗಳಿವೆ ಎಂದು ಆರೋಪಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ 14 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಜಾನುವಾರುಗಳ ಆ್ಯಂಬುಲೆನ್ಸ್ ಸೇವೆಗಳನ್ನು ಒದಗಿಸುವ ಕಂಪನಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ದೋಷಗಳಿವೆ ಎಂದು ಆರೋಪಿಸಿದೆ.
2020 ರಲ್ಲಿ ಕೇಂದ್ರ ಸರ್ಕಾರವು 'ಪಶು ಸಂಜೀವಿನಿ' ಯೋಜನೆಯಡಿ ಪ್ರಾಣಿಗಳಿಗಾಗಿ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿತ್ತು. ಹೊರಗುತ್ತಿಗೆ ಸೇವೆಗಳಿಗೆ ಕಳೆದ ವರ್ಷ ಮೇ ತಿಂಗಳಲ್ಲಿ ಟೆಂಡರ್‌ಗಳನ್ನು ಕರೆಯಲಾಗಿತ್ತು.
ಮೇ ತಿಂಗಳಿನಲ್ಲಿ ಒಂದು ಟೆಂಡರ್ ಹಾಗೂ ಡಿಸೆಂಬರ್ 2022ರಲ್ಲಿ ಮತ್ತೊಂದು ಟೆಂಡರ್ ಕರೆಯಾಗಿತ್ತು. ಈ ಟೆಂಡರ್ ನಲ್ಲಿ ಕಂಪನಿಗಳನ್ನು ಆಯ್ಕೆ ಮಾಡುವ ಮಾನದಂಡಗಳು ಬದಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್‌ಗಳನ್ನು (ಮಾನವರಿಗೆ) ಚಾಲನೆ ಮಾಡುವ ಸೇವಾ ಪೂರೈಕೆದಾರರು ಕೂಡ ಟೆಂಡರ್ ನಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ ಎಂದು ಜಿವಿಕೆ-ಇಎಂಆರ್‌ಐ ಸಂಸ್ಥೆಯ ಮೂಲಗಳು ಮಾಹಿತಿ ನೀಡಿದೆ.
ಕಂಪನಿಗಳು ಭಾಗವಹಿಸುವ ಮಾನದಂಡದಲ್ಲಿನ ಈ ಬದಲಾವಣೆಯು ಕಂಪನಿಗಳು ಒದಗಿಸುವ ಸೇವೆಯ ಗುಣಮಟ್ಟದಲ್ಲಿ ರಾಜಿಯಾಗುವಂತೆ ಮಾಡಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕೆಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಟೆಂಡರ್ ನಲ್ಲಿ ನ್ಯಾಯಯುತ ನಡೆಗಳನ್ನು ಅನುಸರಿಸಲಾಗಿಲ್ಲ ಎಂಬ ಆರೋಪವನ್ನು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ತಳ್ಳಿಹಾಕಿದ್ದಾರೆ.
“ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಈ ಮಾಹಿತಿಯನ್ನು ಯಾರೂ ಬೇಕಾದರೂ ತಿಳಿದುಕೊಳ್ಳಬಹುದು. ಮೇ ತಿಂಗಳಿನಲ್ಲಿ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಬಿಡ್ ದಾರ ಭಾಗವಹಿಸಿದ್ದ. ಹೀಗಾಗಿ ಡಿಸೆಂಬರ್ ತಿಂಗಳಿನಲ್ಲಿ ಮತ್ತೊಂದು ಟೆಂಡರ್ ಕರೆಯಲಾಗಿತ್ತು. ಮಾರ್ಚ್ ವೇಳೆಗೆ ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳುವ ನಿರೀಕ್ಷೆಗಳಿವೆ ಎಂದು ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


