ವಿಷ್ಣು ಸ್ಮಾರಕ ಇಂದು ಲೋಕಾರ್ಪಣೆ: ಮೈಸೂರಿನತ್ತ ಪ್ರಯಾಣ ಆರಂಭಿಸಿದ ವಿಷ್ಣುವರ್ಧನ್ ಅಭಿಮಾನಿಗಳು
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಇಂದು ಅಭಿಮಾನ್ ಸ್ಟೂಡಿಯೋದಲ್ಲಿ ವಿಷ್ಣು ಸಮಾಧಿಗೆ ನಮನ ಸಲ್ಲಿಸಿ ಮೈಸೂರಿನತ್ತ ಪ್ರಯಾಣ ಪ್ರಯಾಣ ಬೆಳೆಸಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷ್ಣು ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಷ್ಣುವರ್ಧನ್ ಪತ್ನಿ ಭಾರತಿ ಮತ್ತು ಕುಟುಂಬದವರು ಭಾಗವಹಿಸಲಿದ್ದಾರೆ.
ನಾಲ್ಕು ದಶಕಗಳ ಕಾಲ ನಿರಂತರವಾಗಿ 200ಕ್ಕೂ ಹೆಚ್ಚು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿದ್ದ ಮತ್ತು ಅಭಿಮಾನಿಗಳ ಪಾಲಿನ ‘ಸಾಹಸ ಸಿಂಹ’ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಅವರ ಕೊಡುಗೆಯ ಸ್ಮರಣೆಗಾಗಿ ಸರ್ಕಾರವು 5 ಎಕರೆ ಜಾಗವನ್ನು ನಿಗದಿಪಡಿಸಿ ರೂ.11 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಿದೆ. ಕರ್ನಾಟಕ ರಾಜ್ಯ ವಿಷ್ಣುವರ್ಧನ್ ಪ್ರತಿಷ್ಠಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪೋಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಮೂಲಕ ಸ್ಮಾರಕ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.
ಸ್ಮಾರಕ ಭವನವು ವಿಷ್ಣು ನಟಿಸಿರುವ ಚಲನಚಿತ್ರ ಹಾಗೂ ಅವರ ಜೀವನಚರಿತ್ರೆಯ 676 ಫೋಟೊಗಳನ್ನು ಒಳಗೊಂಡ ಗ್ಯಾಲರಿ ಒಳಗೊಂಡಿದೆ. ಸೆಲ್ಫಿ ಸ್ಪಾಟ್, ವಿಷ್ಣುವರ್ಧನ್ ಪ್ರತಿಮೆ, ಥಿಯೇಟರ್ ಮೊದಲಾದವುಗಳನ್ನು ಒಳಗೊಂಡಿದೆ.
ಉದ್ಘಾಟನೆ ಅಂಗವಾಗಿ ಸ್ಮಾರಕದ ಬಳಿ ವಿಷ್ಣುವರ್ಧನ್ ಅವರು ಅಭಿನಯಿಸಿದ್ದ ಪಾತ್ರಗಳನ್ನು ಬಿಂಬಿಸುವ ಕಟೌಟ್‌ಗಳನ್ನು ಹಾಕಲಾಗಿದ್ದು, ಗಮನಸೆಳೆಯುತ್ತಿವೆ. ವಿಷ್ಣುವರ್ಧನ್ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಲಾಗುತ್ತದೆ. ಮೈಸೂರಿನವರೇ ಆದ ವಿಷ್ಣುವರ್ಧನ್ ಮೈಸೂರಿನ ಹೋಟೆಲ್‌ನಲ್ಲಿದ್ದಾಗ ನಿಧನರಾಗಿದ್ದರು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆದಿತ್ತು. ಅಭಿಮಾನಿಗಳ ಒತ್ತಾಸೆಯ ಮೇರೆಗೆ ಮೈಸೂರಿನಲ್ಲಿ ಸ್ಮಾರಕ ಮೈದಳೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


