ಕಾಂಗ್ರೆಸ್ ಖಾತರಿಗಳ ಅನುಷ್ಠಾನದ ಮೇಲಿನ ಚರ್ಚೆಗೆ ಸ್ಪೀಕರ್ ಸಮಯ ನಿಗದಿ; ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ
ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.
ಕಾಂಗ್ರೆಸ್ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.
ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.
ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕು ಎಂಬ ತಮ್ಮ ಬೇಡಿಕೆಗೆ ಬಿಜೆಪಿ ಸದಸ್ಯರು ಪಟ್ಟು ಹಿಡಿದರು.
ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


