ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ
ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದಾವಣಗೆರೆ: ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಅಪ್ರಾಪ್ತರನ್ನು ಚಿತ್ರದುರ್ಗದ ವೀಕ್ಷಣಾ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕರು ಎಸ್.ಎಸ್.ನಗರ ಮತ್ತು ಬಾಷಾ ನಗರ ನಿವಾಸಿಗಳು. ಜುಲೈ 1 ರಂದು ಈ ಘಟನೆ ನಡೆದಿದೆ.
ಬಾಲಕರು ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿತ್ತು.
ಎರಡನೇ ವಂದೇ ಭಾರತ್ ರೈಲಿನ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 26 ರಂದು ಚಾಲನೆ ನೀಡಿದ್ದರು.
ಈ ಘಟನೆ ಪ್ರಯಾಣಿಕರು ಹಾಗೂ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


