ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ- ಸಿಎಂ ಸಿದ್ದರಾಮಯ್ಯ
ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು.
ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು. ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


