ವಿಮಾನ ನಿಲ್ದಾಣದಲ್ಲಿ ತಾಮ್ರದ ಕೇಬಲ್ ಕದ್ದ ಹೌಸ್ ಕೀಪರ್ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ
ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್‌ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್‌ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕೇಬಲ ಕದ್ದ ರಾಹುಲ್ ಕುಮಾರ್ ವಿರುದ್ಧ ಕೆಐಎ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಇಂದು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು 2 ನಡುವೆ ಮಲ್ಟಿ ಮಾಡಲ್ ಟ್ರಾನ್ಸ್‌ಪೋರ್ಟ್ ಹಬ್(ಎಂಎಂಟಿಎಚ್) ನಿರ್ಮಿಸುತ್ತಿರುವ ಗೋದ್ರೇಜ್ ಮತ್ತು ಬಾಯ್ಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 379(ಕಳ್ಳತನ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಎಸ್ಎಲ್ ವಿ ಸರ್ವಿಸೆಸ್, ತನ್ನ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿದ್ದ ರಾಹುಲ್ ಕುಮಾರ್ ನನ್ನು ಕೆಲಸದಿಂದ ವಜಾ ಮಾಡಿದೆ.
ಬಿಹಾರ ಮೂಲದ ಕುಮಾರ್ ಮಂಗಳವಾರ ಸಂಜೆ 5.30 ರ ಸುಮಾರಿಗೆ ಕೇಬಲ್ ಅನ್ನು ಹೊತ್ತುಕೊಂಡು ನಿರ್ಮಾಣ ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್(BIAL)ನ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಅದರ ಬಗ್ಗೆ ಆತನನ್ನು ಕೇಳಿದಾಗ, ತನ್ನ ಬಟ್ಟೆ ಒಣಗಿಸಲು ಈ ಕೇಬಲ್ ಬೇಕಾಗಿದೆ ಎಂದು ಹೇಳಿದ್ದಾನೆ.
ಈ ಬಗ್ಗೆ ಭದ್ರತಾ ಸಿಬ್ಬಂದಿ ಗೋದ್ರೇಜ್‌ಗೆ ಮಾಹಿತಿ ನೀಡಿದ್ದಾರೆ. "ಅವರು ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇಬಲ್‌ನ ಮೌಲ್ಯ ಕೇವಲ 3000 ರೂ. ಆದರೆ, ಭವಿಷ್ಯದಲ್ಲಿ ಹೆಚ್ಚು ಬೆಲೆಬಾಳುವ ವಸ್ತುಗಳು ಕಳ್ಳತನವಾಗುವ ಸಾಧ್ಯತೆಯಿದೆ. ಆದ್ದರಿಂದ, ಅವರು ಕೇಸ್ ದಾಖಲಿಸಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.
ಕೇಬಲ್‌ಗಳಲ್ಲಿನ ತಾಮ್ರವನ್ನು ಹೊರ ತೆಗೆದು ಅದನ್ನು ಸ್ಕ್ರ್ಯಾಪ್ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಹೀಗಾಗಿ ಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ಜಾಮೀನಿನ ಮೇಲೆ ಹೊರಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


