ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರು: ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.
ಇನ್ನು ಬೆಳಗಾವಿಯ ಗೊರೂರು ಮಠದ ಗುಣಾಧಾರನಂದಿ ಮಹಾರಾಜ ಸ್ವಾಮೀಜಿಗಳು ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.
ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


