ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ಲಿಫ್ಟ್
ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.

ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
83 ವರ್ಷದ ಕಸ್ತೂರಿರಂಗನ್ ಅವರನ್ನು ವಿಮಾನದ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ ಎಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಅವರನ್ನು ದಾಖಲಿಸಲಾಗುತ್ತಿದೆ.
ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿರಂಗನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಸ್ತೂರಿರಂಗನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗುತ್ತಿದ್ದು, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


