ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.
ಈ ಘಟನೆ ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಮೃತ ಯುವಕ ವೇಣುಗೋಪಾಲ್ ಯುವಬ್ರಿಗೇಡ್ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.
ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ
ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


