ಬೆಂಗಳೂರಿನಲ್ಲಿ ಜೋಡಿ ಕೊಲೆ: ಹಾಡುಹಗಲೇ ಏರೋನಿಕ್ಸ್ ಕಂಪನಿ ಸಿಇಒ, ಎಂಡಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಚುಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಇಂದು ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು, ಇಂದು ಸಂಜೆ ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ತೆರಳಿ ಪಣೀಂದ್ರ ಹಾಗೂ ವಿನುಕುಮಾರ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


