ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ; ಆರು ಮಂದಿ ಬಂಧನ
ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ನಡೆದ ಜಗಳ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಪಟ್ಟಣದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಮೆರವಣಿಗೆ ವೇಳೆ ಸಂಧಾನ ಮಾಡಿ ಕಳುಹಿಸಲಾಗಿತ್ತು. ಆದರೆ ಭಾನುವಾರ ಮತ್ತೆ ಜಗಳ ನಡೆದಿತ್ತು, ಆ ವೇಳೆ ವೇಣುಗೋಪಾಲ್ ನಾಯಕ್ ಹತ್ಯೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


