ಡಿ.ಜೆ.ಹಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ
ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿಯ ಕೆಎಚ್‌ಬಿ ಮುಖ್ಯರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ರೌಡಿ ಶೀಟರ್ ಕಪಿಲ್‌ನನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಎರಡು ಬೈಕ್‌ನಲ್ಲಿ ಬಂದ ನಾಲ್ವರು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಕಪಿಲ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದರು.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮೃತ ರೌಡಿಶೀಟರ್ ಕಪಿಲ್, 2014ರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಡಿ.ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆಗೆ ಡಿಸಿಪಿ ಭೀಮಾಶಂಕರ ಗುಳೇದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ರಾತ್ರಿ ಎಂಟು ಗಂಟೆ ಸುಮಾರಿಗೆ ಸ್ನೇಹಿತರನ್ನು ನೋಡಲು ಡಿ.ಜೆ.ಹಳ್ಳಿಗೆ ಕಪಿಲ್ ಬಂದಿದ್ದ. ಈ ವೇಳೆ ಎರಡು ಬೈಕ್‌ಗಳಲ್ಲಿ ಹೆಲ್ಮೆಟ್ ಧರಿಸಿ ದುಷ್ಕರ್ಮಿಗಳು ಬಂದಿದ್ದರು. ಬೈಕ್‌ವೊಂದರ ನಂಬರ್ ಪ್ಲೇಟ್ ಮೇಲೆ ಅನುಮಾನ ಪಟ್ಟ ಕಪಿಲ್, ನಂಬರ್ ಪ್ಲೇಟ್ ನೋಡುವಂತೆ ಸ್ನೇಹಿತನನ್ನು ಕಳುಹಿಸಿದ್ದಾನೆ.
ಸ್ನೇಹಿತ ಹೋಗುತ್ತಿದ್ದಂತೆ ಕಪಿಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸುಮಾರು ನೂರು ಮೀಟರ್ ಅಟ್ಟಿಸಿಕೊಂಡು ಹೋಗಿ ಕಪಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕಪಿಲ್, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


