ವೀಸಾ ಅವಧಿ ಮುಗಿದರೂ 754 ವಿದೇಶಿಗರು ರಾಜ್ಯದಲ್ಲಿ ಅಕ್ರಮ ವಾಸ: ಡಾ. ಜಿ.ಪರಮೇಶ್ವರ್
ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ 754 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ವಿಧಾನಪರಿಷತ್ತಿನಲ್ಲಿ ಬಹಿರಂಗಪಡಿಸಿದರು.

ಬೆಂಗಳೂರು: ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ 754 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ವಿಧಾನಪರಿಷತ್ತಿನಲ್ಲಿ ಬಹಿರಂಗಪಡಿಸಿದರು.
ಒಟ್ಟಾರೆಯಾಗಿ ರಾಜ್ಯದಲ್ಲಿ 8,862 ವಿದೇಶಿಗರು ವಾಸಿಸುತ್ತಿದ್ದು, ಅಕ್ರಮವಾಗಿ ನೆಲೆಸಿರುವ 754 ವಿದೇಶಿಗರ ಪೈಕಿ 718 ಮಂದಿ ಬೆಂಗಳೂರಿನಲ್ಲಿದ್ದು, ಅವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದರು.
ವಿದೇಶಿಯರ ನೋಂದಣಿ ಕಚೇರಿಯಿಂದ (ಎಫ್ಆರ್ಒ) ಸರ್ಕಾರ ವಿದೇಶಿಯರ ಬಗ್ಗೆ ವಿವರಗಳನ್ನು ಪಡೆದುಕೊಂಡಿದೆ ಮತ್ತು ಅವರನ್ನು ಪತ್ತೆ ಮಾಡಲು ಪೊಲೀಸ್ ಠಾಣೆಗಳಲ್ಲಿ ತಂಡಗಳನ್ನು ರಚಿಸಲಾಗಿದೆ. ಅವರು ಪತ್ತೆಯಾದ ನಂತರ,ಗಡಿಪಾರು ಮಾಡುವ ಮೊದಲು ವಿದೇಶಿಯರ ಬಂಧನ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಅವರು ಹೇಳಿದರು.
ಪ್ರಶ್ನೋತ್ತರ ವೇಳೆಗೆ ವಿಧಾನಪರಿಷತ್ ಸದಸ್ಯ ಎಚ್.ಎಸ್. ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾದಕ ದ್ರವ್ಯ ಸಾಗಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ವಿದೇಶಿಗರ ವಿರುದ್ಧ 501 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ 451 ಪ್ರಕರಣಗಳು ದಾಖಲಾಗಿವೆ. 4,890 ವಿದ್ಯಾರ್ಥಿಗಳು ವಿದ್ಯಾರ್ಥಿ ವೀಸಾದಲ್ಲಿ ರಾಜ್ಯದಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅಧಿಕಾರಿಗಳು ಅವರ ಚಟುವಟಿಕೆಗಳ ಬಗ್ಗೆ ನಿಯಮಿತವಾಗಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ ಎಂದು ಗೃಹ ಸಚಿವರು ಕೌನ್ಸಿಲ್ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


