ರಾಜ್ಯ

ವಂಶಿಕಾ ಮಾಸ್ಟರ್ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ.

ವಂಶಿಕಾ ಮಾಸ್ಟರ್ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ
ವಂಶಿಕಾ-ನಿಶಾ
Published On :

ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ. 

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿಶಾ ನರಸಪ್ಪಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ನಂತರ 39ನೇ ಎಸಿಎಮ್ಎಮ್ ಕೋರ್ಟ್ ಮುಂದೆ ನಿಶಾಳನ್ನು ಹಾಜರುಪಡಿಸಿದ್ದರು.

ಯಶಸ್ವಿನಿ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.

ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು. ಇದುವರೆಗೂ 17 ಜನರಿಗೆ ನಿಶಾ ವಂಚಿಸಿದ್ದಾಳೆ ಎಂದು  ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.